ADVERTISEMENT

ಶಿಕ್ಷಕರ ನೇಮಕಾತಿ: 14ರಿಂದ ನಿರಶನ

​ಪ್ರಜಾವಾಣಿ ವಾರ್ತೆ
Published 9 ಮೇ 2019, 18:45 IST
Last Updated 9 ಮೇ 2019, 18:45 IST

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ 10 ಸಾವಿರಕ್ಕೂ ಅಧಿಕ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಡಿಇಡಿ, ಬಿಇಡಿ ಜತೆಗೆ ಟಿಇಟಿ ಅರ್ಹತೆ ಪಡೆದವರನ್ನು ನೇಮಕಾತಿಯಿಂದ ವಂಚಿಸಲಾಗುತ್ತಿದೆ. ಈ ನೇಮಕಾತಿ ತಡೆಹಿಡಿಯಬೇಕು ಎಂದು ಆಗ್ರಹಿಸಿ ಅವಕಾಶ ವಂಚಿತ ಶಿಕ್ಷಕರು ಇದೇ 14ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ಈ ಸತ್ಯಾಗ್ರಹ ನಡೆಯಲಿದ್ದು, ರಾಜ್ಯದ ಎಲ್ಲ ಭಾಗಗಳಿಂದ ಶಿಕ್ಷಕರು ಪಾಲ್ಗೊಳ್ಳಲಿದ್ದಾರೆ. ಕಾನೂನಿನ ಎಲ್ಲ ಅಡೆತಡೆಗಳನ್ನು ದೂರ ಮಾಡಿ, ಪ್ರತಿಯೊಬ್ಬರಿಗೂ ಅವಕಾಶ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಲಾಗುವುದು ಎಂದು ನೊಂದ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT