ADVERTISEMENT

ಶಾಲೆಗಳಲ್ಲಿ ವಾರದಲ್ಲಿ 6 ದಿನ ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಶಿಕ್ಷಣ ಸಚಿವ ಚಾಲನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2024, 11:14 IST
Last Updated 25 ಸೆಪ್ಟೆಂಬರ್ 2024, 11:14 IST
<div class="paragraphs"><p>ವಿದ್ಯಾರ್ಥಿಯೊಂದಿಗೆ ಪೌಷ್ಠಿಕ ಆಹಾರ ಸೇವಿಸಿದ ಸಚಿವ ಮಧು ಬಂಗಾರಪ್ಪ</p></div>

ವಿದ್ಯಾರ್ಥಿಯೊಂದಿಗೆ ಪೌಷ್ಠಿಕ ಆಹಾರ ಸೇವಿಸಿದ ಸಚಿವ ಮಧು ಬಂಗಾರಪ್ಪ

   

– ಪ್ರಜಾವಾಣಿ ಚಿತ್ರ

ಯಾದಗಿರಿ: ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.

ADVERTISEMENT

ಯಾದಗಿರಿ ತಾಲ್ಲೂಕಿನ ಅರಕೇರಾ (ಕೆ) ಸರ್ಕಾರಿ ಪ್ರೌಢ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

2024-25ನೇ ಸಾಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಕ್ಷರ ದಾಸೋಹ ಮಧ್ಯಾಹ್ನ ಉಪಾಹಾರ ಯೋಜನೆಯಡಿ ಬೆಂಗಳೂರು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ.‌

ಈ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ವಾರದಲ್ಲಿ 6 ದಿನ ಮೊಟ್ಟೆ ವಿತರಿಸಲು ಚಾಲನೆ ನೀಡಲಾಗಿದೆ. ರಾಜ್ಯದ 57 ಲಕ್ಷ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯುತ್ತಿದ್ದಾರೆ. ಇದಕ್ಕೆ ಅಜೀಂ ಪ್ರೇಮ್ ಜಿಯವರು ಕೈ ಜೋಡಿಸಿದ್ದಾರೆ ಎಂದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಶಾಸಕರಾದ ಶಶೀಲ್ ಜಿ ನಮೋಶಿ, ಚನ್ನಾರೆಡ್ಡಿ ಪಾಟೀಲ ತುನ್ನೂರು, ಶರಣಗೌಡ ಕಂದಕೂರ, ಜಿಪಂ ಸಿಇಒ ಲವೀಶ್ ಒರ್ಡಿಯಾ, ಅಜೀಂ ಪ್ರೇಮ್ ಜಿ ಫೌಂಡೇಷನ್ ಮುಖ್ಯಸ್ಥ ರುದ್ರೇಶ್, ಡಿಡಿಪಿಐ ಮಂಜುನಾಥ ಸೇರಿದಂತೆ ಶಿಕ್ಷಕರು‍ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.