ADVERTISEMENT

ಕೀ ಉತ್ತರದ ಸನಿಹದ ಪದಕ್ಕೂ ಅಂಕ

ಫೋನ್‌ ಇನ್‌ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 28 ಜನವರಿ 2020, 19:58 IST
Last Updated 28 ಜನವರಿ 2020, 19:58 IST
   

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತರಿಸುವಾಗ ಕೀ ಉತ್ತರಗಳಲ್ಲಿ ಬಳಸಿರುವ ಪದಗಳ ಬದಲು ಅದಕ್ಕೆ ಸನಿಹದ ಪದಗಳನ್ನು ಬಳಸಿದರೂ ಅಂಕಗಳು ದೊರೆಯುತ್ತವೆ’ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್ಇಇಬಿ) ನಿರ್ದೇಶಕಿ ವಿ.ಸುಮಂಗಲಾ ಹೇಳಿದರು.

ಮಂಗಳವಾರ ‘ಸಂವೇದನಾ’ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಅವರೊಂದಿಗೆ ಪಾಲ್ಗೊಂಡು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ಕಳೆದ ಬಾರಿಯಂತೆಯೇ ಈ ಬಾರಿಯೂ ಪ್ರಶ್ನೆಗಳು ಇರುತ್ತವೆ. ಪರೀಕ್ಷಾ ಮಾದರಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಗಣಿತ ಮತ್ತು ಇಂಗ್ಲಿಷ್‌ಪತ್ರಿಕೆಗಳಿಗೆ ಉತ್ತರಿಸುವ ಸಮಯವನ್ನು ಹೆಚ್ಚಿಸಲಾಗಿದೆ’ ಎಂದರು.

ಬೆಂಗಳೂರಿನ ನಾಗರಬಾವಿ ಶಾಲೆಯ ವಿದ್ಯಾರ್ಥಿನಿಯೊಬ್ಬಳ ಪ್ರಶ್ನೆಗೆ, ‘ಇನ್ನು ಶಾಲಾ– ಕಾಲೇಜುಗಳಲ್ಲಿ ಎನ್ಎಸ್ಎಸ್ ಯೋಜನೆಯನ್ನು ಇನ್ನಷ್ಟು ಬಲಗೊಳಿಸಿ ಸಮಾಜ ಸೇವೆಗೆ ಮಕ್ಕಳನ್ನು ಚೆನ್ನಾಗಿ ತಯಾರು ಮಾಡಲು ಕ್ರಮ ವಹಿಸಲಾಗುವುದು’ ಎಂದು ಸುರೇಶ್ ಕುಮಾರ್ ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.