ADVERTISEMENT

‘ಪ್ರಜಾವಾಣಿ’ ವರದಿ ಪರಿಣಾಮ| ‘ಪ್ರಬುದ್ಧ’ ಯೋಜನೆ ಮುಂದುವರಿಯಲಿದೆ: ಸಚಿವ ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 16:02 IST
Last Updated 21 ಜುಲೈ 2024, 16:02 IST
ಎಚ್‌.ಸಿ. ಮಹದೇವಪ್ಪ
ಎಚ್‌.ಸಿ. ಮಹದೇವಪ್ಪ   

ಬೆಂಗಳೂರು: ‘ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಪ್ರಬುದ್ಧ’ ಯೋಜನೆಯಡಿ ನೀಡಲಾಗುತ್ತಿದ್ದ ಸಹಾಯಧನ ಮುಂದುವರಿಸಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

‘ಪ್ರಬುದ್ಧ’ ಯೋಜನೆಯನ್ನು 2023-24ನೇ ಸಾಲಿನಿಂದ ಕೈಬಿಟ್ಟಿರುವ ಕುರಿತು ‘ಪ್ರಜಾವಾಣಿ’ಯ ಶನಿವಾರದ ಸಂಚಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಈ ಕುರಿತು ತಮ್ಮ ‘X’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ಪ್ರಬುದ್ಧ’ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಎಚ್. ಡಿ ಅಧ್ಯಯನಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದೆ. ಈ ಯೋಜನೆ ಹಿಂದಿನ ರೀತಿಯಲ್ಲೇ ಮುಂದುವರಿಯಲಿದೆ. ಈ ಕುರಿತು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದಿದ್ದಾರೆ.

ADVERTISEMENT

ಪ್ರಜಾವಾಣಿಯಲ್ಲಿ ಪ್ರಕಟವಾಗಿದ್ದ ವಿಶೇಷ ವರದಿ

‘ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಬಾಬಾ ಸಾಹೇಬರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ. ಈ ಹಿನ್ನಲೆಯಲ್ಲಿ, ಈ ಹಿಂದಿನಂತೆಯೇ ವಿಶ್ವದ ಅಗ್ರ 100 ವಿಶ್ವವಿದ್ಯಾಲಯಗಳಲ್ಲಿ ಪಿಎಚ್. ಡಿ ವ್ಯಾಸಂಗಕ್ಕೆ ಆಯ್ಕೆಯಾಗುವ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಈ ಯೋಜನೆಯ ಅನುಕೂಲ ಸಿಗಲಿದೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.