ಹುಬ್ಬಳ್ಳಿ: ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಒಬ್ಬರ ಹೆಸರು 2-3 ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿದ್ದರೆ ಅಂತಹ ಹೆಸರುಗಳನ್ನು ತೆಗೆದುಹಾಕಿ, ಅಧಿಕೃತವಾಗಿ ವಾಸವಾಗಿರುವ ಕ್ಷೇತ್ರದಲ್ಲಿ ಮಾತ್ರ ಹೆಸರು ಉಳಿಸಿಕೊಳ್ಳಲಾಗುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೆಲವೊಬ್ಬರ ಹೆಸರುಗಳನ್ನು ಅನಧಿಕೃತವಾಗಿ ಹುಬ್ಬಳ್ಳಿ, ಬೆಂಗಳೂರು ಎರಡೆರಡು ಕಡೆ ಮತದಾರರ ಪಟ್ಟಿಯಲ್ಲಿ ಸೇರಿಸಲಾಗುತ್ತಿರುತ್ತದೆ. ಇಂತಹವುಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಯಾವುದಾದರೂ ಒಂದು ಕಡೆ ಇಟ್ಟು, ಇನ್ನುಳಿದ ಕಡೆ ತೆಗೆದುಹಾಕಲಾಗುತ್ತಿದೆ. ಕೇಂದ್ರ ಹಾಗು ರಾಜ್ಯ ಚುನಾವಣಾ ಆಯೋಗ ಈ ಕೆಲಸವನ್ನು ಮಾಡುತ್ತಿವೆ’ ಎಂದು ತಿಳಿಸಿದರು.
‘ಎಲ್ಲೆಲ್ಲಿ ಇಂತಹ ಪ್ರಕರಣಗಳ ಬಗ್ಗೆ ಚುನಾವಣಾ ಆಯೋಗ ದೂರು ನೀಡುತ್ತದೆಯೋ ಅಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುವುದು’ ಎಂದರು.
ವರದಿಗೆ ಸೂಚನೆ:
ಬೆಳಗಾವಿಯಲ್ಲಿ ನಾಡಧ್ವಜ ಹಿಡಿದು ಕುಣಿದಾಡಿದ ವಿದ್ಯಾರ್ಥಿಯ ಮೇಲೆ ನಡೆದ ಹಲ್ಲೆ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅಲ್ಲಿನ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ವರದಿ ನೋಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.