ADVERTISEMENT

ಅನರ್ಹ ಶಾಸಕರಿಗೆ ಚುನಾವಣೆ ಸ್ಪರ್ಧಿಸುವ ಅವಕಾಶ ಇಲ್ಲ: ಸಂಜೀವ್ ಕುಮಾರ್

ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 10:22 IST
Last Updated 21 ಸೆಪ್ಟೆಂಬರ್ 2019, 10:22 IST
ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್
ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್   

ಬೆಂಗಳೂರು: ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಲಾಗದು ಎಂದು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸ್ಪೀಕರ್ ತಡೆ ಒಡ್ಡಿದ್ದಾರೆ. ಶಾಸಕರ ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಸ್ವೀಕೃತವಾಗಿಲ್ಲ. ಹೀಗಾಗಿ ಅನರ್ಹರು ಚುನಾವಣೆಯಲ್ಲಿ ಸ್ಪರ್ಧಿಸಲು ಬರುವುದಿಲ್ಲ’ ಹೇಳಿದರು.

ಅನರ್ಹರ ಸ್ಪರ್ಧೆ ಬಗ್ಗೆ ನಾನು ಏನೂ ಹೇಳುವ ಸ್ಥಿತಿಯಲ್ಲಿ ಇಲ್ಲ. ಆದರೆ ಸದ್ಯ ಅವರು ಈ ವಿಚಾರದಲ್ಲಿ ಸಂಬಂಧವೇ ಇಲ್ಲದವರಾಗುತ್ತಾರೆ ಎಂದೂ ಅವರು ಹೇಳಿದರು.

ನೀತಿ ಸಂಹಿತೆ ಜಾರಿ: ಉಪಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ. ಕ್ಷೇತ್ರಗಳಿರುವ ಜಿಲ್ಲೆಗೆ ಇದು ಅನ್ವಯವಾಗುತ್ತದೆ. ಆದರೆ ನೆರೆ ಪರಿಹಾರ ಕಾರ್ಯಗಳು, ದಸರಾಗೆ ತೊಂದರೆಯಾಗುವುದಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದರು.

ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ಶಾಸಕರು ಗೆದ್ದು ಬಂದಿರುವ ವಿರುದ್ಧ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಹೀಗಾಗಿ ಈ ಎರಡು ಕ್ಷೇತ್ರಗಳಿಗೆ ಚುನಾವಣೆ ಪ್ರಕಟಿಸಿಲ್ಲ ಎಂದೂ ಸಂಜೀವ್ ಕುಮಾರ್ ತಿಳಿಸಿದರು.

ಇನ್ನಷ್ಟು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.