ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್ 14 ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲಹರ್ ಸಿಂಗ್ ಸಿರೋಯಾ, ಕಾಂಗ್ರೆಸ್‌ನ ಆರ್.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್‌ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್.ಎಂ. ರಮೇಶ್ ಗೌಡ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ. ಮೇ 17 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ಮೇ 24 ನಾಮಪತ್ರ ಸಲ್ಲಿಸಲು ಕೊನೆಯ ದಿನ. 25 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 27 ಕೊನೆಯ ದಿನ.
ಜೂನ್ 3 ರಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.