ADVERTISEMENT

ನಿಗದಿಯಂತೆ ನಗರ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ, ಬದಲಾವಣೆ ಇಲ್ಲ: ಚುನಾವಣಾ ಆಯೋಗ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2021, 16:16 IST
Last Updated 23 ಏಪ್ರಿಲ್ 2021, 16:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಮತ್ತು ವಿವಿಧ ಕಾರಣಗಳಿಂದಾಗಿ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿನ 2 ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ಏ. 27ರಂದು ನಡೆಸಲು ತೀರ್ಮಾನಿಸಿದೆ.

ಚುನಾವಣೆ ನಡೆಯುವ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಯ ಮತಕ್ಷೇತ್ರಗಳಲ್ಲಿನ ಎಲ್ಲಾ ರಂಗದ ಅರ್ಹ ಮತದಾರ ನೌಕರರಿಗೆ ಚುನಾವಣೆ ನಡೆಯುವ ದಿನಾಂಕದಂದು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ. ಈ ರಜೆಯು ತುರ್ತು ಸೇವೆಯಲ್ಲಿರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ.

ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯಕ್ಕೆ ಹಾಜರಾಗಬೇಕು ಎಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.