ADVERTISEMENT

4 ಲಕ್ಷ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌: ಜಾರ್ಜ್‌

​ಪ್ರಜಾವಾಣಿ ವಾರ್ತೆ
Published 22 ಜುಲೈ 2024, 14:34 IST
Last Updated 22 ಜುಲೈ 2024, 14:34 IST
<div class="paragraphs"><p>ಕೆ.ಜೆ ಜಾರ್ಜ್‌&nbsp;</p></div>

ಕೆ.ಜೆ ಜಾರ್ಜ್‌ 

   

ಬೆಂಗಳೂರು: ‘ರಾಜ್ಯದಲ್ಲಿ ನಾಲ್ಕು ಲಕ್ಷ ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಒದಗಿಸಿ, ಸಕ್ರಮಗೊಳಿಸಲು ₹8 ಸಾವಿರ ಕೋಟಿಯಿಂದ ₹9 ಸಾವಿರ ಕೋಟಿ ವೆಚ್ಚವಾಗಲಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಎಂ.ಪಿ. ಕುಶಾಲಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೀರಾವರಿ ಪಂಪ್‌ಸೆಟ್‌ಗಳ ಅಕ್ರಮದಿಂದ ಸಕ್ರಮಕ್ಕೆ ₹6 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಮೇರೆಗೆ ವಿದ್ಯುತ್‌ ಸಂಪರ್ಕ ಅಧಿಕೃತಗೊಳಿಸಲಾಗುತ್ತಿದೆ. ಪ್ರತಿ ವರ್ಷ ಸುಮಾರು ಒಂದು ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.