ADVERTISEMENT

ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: 8 ಸಲ ಅಂಬಾರಿ ಹೊತ್ತಿದ್ದ ಅರ್ಜುನನ ದಾರುಣ ಸಾವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2023, 12:22 IST
Last Updated 4 ಡಿಸೆಂಬರ್ 2023, 12:22 IST
<div class="paragraphs"><p>ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಅರ್ಜುನ</p></div>

ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಅರ್ಜುನ

   

ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ ಕಾಡಾನೆ ಸೆರೆ, ರೆಡಿಯೊ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ, ಒಂಟಿ ಸಲಗವೊಂದು ಹೊಟ್ಟೆಗೆ ತಿವಿದಿದ್ದರಿಂದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಸೋಮವಾರ ಮಧ್ಯಾಹ್ನ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಅರಿವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಪುಂಡಾನೆಯೊಂದು ದಾಳಿ ಮಾಡಿದೆ. ನಾಲ್ಕು ಸಾಕಾನೆಗಳ ಜೊತೆಗೆ ಅದನ್ನು ಹಿಮ್ಮೆಟ್ಟಿಸಲು ಮಾವುತರು ಪ್ರಯತ್ನಿಸಿದರು.

ADVERTISEMENT

ಮೂರು ಆನೆಗಳು ಹಿಂದೆ ಸರಿದಿದ್ದು, ಸಾಕಾನೆ ಅರ್ಜುನನ ಮೇಲೆ ಕಾಡಾನೆ ದಾಳಿ ನಡೆಸಿದೆ. ದಾಳಿ ತೀವ್ರವಾಗುತ್ತಿದ್ದಂತೆಯೇ ಅರ್ಜುನನ ಮಾವುತರು ಕೇಳಕ್ಕೆ ಇಳಿದು ಓಡಿ ಬಂದಿದ್ದಾರೆ. ಹೊಟ್ಟೆ ಭಾಗಕ್ಕೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಾಕಾನೆ ಅರ್ಜುನ ಮೃತಪಟ್ಟಿದೆ.

ಅರ್ಜುನ

ಅಂಬಾರಿ ಹೊತ್ತಿದ್ದ ಅರ್ಜುನ: 2012 ರಿಂದ 2019 ರವರೆಗಿನ ಮೈಸೂರು ದಸರಾ ಉತ್ಸವದ ಒಟ್ಟು 8 ಬಾರಿ ಅರ್ಜುನ ಆನೆ ಅಂಬಾರಿ ಹೊತ್ತಿತ್ತು.

ಇದೀಗ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಮೃತಪಟ್ಟಿದ್ದು, ಮಾವುತರು ಕಣ್ಣೀರಿಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.