ತುಮಕೂರು: ತುಂಬಾ ತಡವಾಗಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇದು ಮೂರ್ನಾಲ್ಕು ವರ್ಷದ ಹಿಂದೆಯೇ ಆಗಬೇಕಾಗಿತ್ತು. ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಇನ್ನೂ ಚಾರ್ಜ್‌ಶೀಟ್ ನೋಡಿಲ್ಲ. ಕಾರಾಗೃಹದಲ್ಲಿ ಇರಬೇಕಾದರೆ, ಜೈಲಿನಿಂದ ಹೊರ ಬಂದ ಆರು ತಿಂಗಳ ಒಳಗಡೆ ಹಾಕಬೇಕಿತ್ತು ಎಂದರು.
ಪರಿಷ್ಕೃತ ಪಠ್ಯಪುಸ್ತಕದ ಮೂಲಕ ಸಂವಿಧಾನ ಶಿಲ್ಪಿ ಅಂಬೇಡ್ಕರ್, ಬಸವಣ್ಣ, ಶಂಕರಾಚಾರ್ಯ, ಕುವೆಂಪು, ನಾರಾಯಣಗುರು ಸೇರಿದಂತೆ ಅನೇಕ ಮಹನೀಯರಿಗೆ ಅವಮಾನ ಮಾಡಿದ್ದಾರೆ. ಇದನ್ನು ಸಹಿಸಿಕೊಂಡು ಇರಲು ಸಾಧ್ಯವೇ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯಲ್ಲಿ ಸ್ವಾಮೀಜಿ ಇದ್ದರು ಎನ್ನುವ ಕಾರಣಕ್ಕೆ ಸುಮ್ಮನಿದ್ದೆ, ಬೇರೆ ಕಡೆ ಆದರೆ ಪಠ್ಯಪುಸ್ತಕ ಹರಿದು ಹಾಕುವುದಲ್ಲ ಸುಡುತ್ತಿದ್ದೆ. ಮುಂದಕ್ಕೂ ಅಂತ ಕಾಲ ಬರುತ್ತದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.