ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಶುಲ್ಕ 2024–25ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ.
ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಜೂನ್ 14ರಂದು ನಡೆದಿದ್ದ ಸಭೆಯಲ್ಲಿ ಶೇ 10ರಷ್ಟು ಹೆಚ್ಚಳ ಮಾಡಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿತ್ತು.
ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್‌ಗೆ ಪ್ರವೇಶ ಪಡೆಯುವವರಿಗೆ ₹42,116 ಶುಲ್ಕ ನಿಗದಿ ಮಾಡಲಾಗಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು ಪ್ರತಿ ವಿದ್ಯಾರ್ಥಿಯಿಂದ ಇತರೆ ಶುಲ್ಕವಾಗಿ ವಾರ್ಷಿಕ ಗರಿಷ್ಠ ₹20 ಸಾವಿರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಾಲೇಜುಗಳು;ಶುಲ್ಕ(₹ಗಳಲ್ಲಿ)
ಸರ್ಕಾರಿ/ಅನುದಾನಿತ ಕಾಲೇಜು;42,116
ಯುವಿಸಿಇ, ಬೆಂಗಳೂರು;47,250
ಖಾಸಗಿ ಕಾಲೇಜು ಸರ್ಕಾರಿ ಕೋಟಾ;76,135–84,596
ಕಾಮೆಡ್-ಕೆ;1,86,111– 2,61,477
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.