ADVERTISEMENT

2 ವರ್ಷದ ಒಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಜಿ. ಪರಮೇಶ್ವರ

ನಮ್ಮ ಸರ್ಕಾರ ಯೋಜನೆಯ ಕೆಲಸವನ್ನು ಮತ್ತೆ ಆರಂಭಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2023, 14:07 IST
Last Updated 18 ಡಿಸೆಂಬರ್ 2023, 14:07 IST
<div class="paragraphs"><p> ಗೃಹ ಸಚಿವ ಜಿ. ಪರಮೇಶ್ವರ </p></div>

ಗೃಹ ಸಚಿವ ಜಿ. ಪರಮೇಶ್ವರ

   

ಬೆಂಗಳೂರು: ‘ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಹೀಗಾಗಿ ಯೋಜನೆ ಸ್ಥಗಿತಗೊಂಡಿತ್ತು. ನಮ್ಮ ಸರ್ಕಾರ ಯೋಜನೆಯ ಕೆಲಸವನ್ನು ಮತ್ತೆ ಆರಂಭಿಸಿದೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಎತ್ತಿನಹೊಳೆ ಯೋಜನೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಎರಡು ವರ್ಷದ ಒಳಗೆ ಯೋಜನೆಯನ್ನು ಪೂರ್ಣಗೊಳಿಸಲಾಗುವುದು’ ಎಂದರು.

ADVERTISEMENT

‘ಎತ್ತಿನಹೊಳೆ ಯೋಜನೆಗೆ ಆರಂಭದಲ್ಲಿ ₹ 13,500 ಸಾವಿರ ಕೋಟಿ ವೆಚ್ಚ ಅಂದಾಜಿಸಲಾಗಿತ್ತು. ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ ₹ 22 ಸಾವಿರ ಕೋಟಿ ಅಂದಾಜಿಸಲಾಗಿದೆ. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು’ ಎಂದರು.

‘ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ. ಯೋಜನೆಯಲ್ಲಿ ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು. ನೀರು ಸಂಗ್ರಹಿಸುವ ಟ್ಯಾಂಕ್‌ ನಿರ್ಮಿಸಲು ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ ₹ 8 ಲಕ್ಷ ಹಾಗೂ ದೊಡ್ಡಬಳ್ಳಾಪುರದಲ್ಲಿ ಭೂಮಿಗೆ ಎಕರೆಗೆ ₹ 32 ಲಕ್ಷ ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.