ADVERTISEMENT

ಸರ್ಕಾರ ತಪ್ಪುತಿದ್ದಿಕೊಳ್ಳದಿದ್ದರೆ, ಪ್ರಶ್ನಿಸುವುದು ಅನಿವಾರ್ಯ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 9:56 IST
Last Updated 9 ಜುಲೈ 2020, 9:56 IST
 ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ಸಂಕಷ್ಟದ ಕಾಲದಲ್ಲಿ ಮೂರು ತಿಂಗಳು ಸಹಕಾರ ನೀಡಿ ಸರ್ಕಾರದ ವೈಫಲ್ಯಗಳನ್ನು ಪ್ರಶ್ನಿಸಲಿಲ್ಲ. ಪತ್ರದ ಮೂಲಕ ತಿಳಿಸಿ ತಿದ್ದಿಕೊಳ್ಳುವಂತೆ ಹೇಳಲಾಗಿತ್ತು. ಆದರೂ ನೀವು ತಿದ್ದಿಕೊಳ್ಳದಿದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಹಕಾರ ನೀಡುವುದು ವಿರೋಧ ಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಮೂರು ತಿಂಗಳು ಸರ್ಕಾರದ ಅಕ್ರಮ ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸಿರಲಿಲ್ಲ ತಿದ್ದುಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ ಎಂದು ಗುಡುಗಿದ್ದಾರೆ.

ಟ್ವೀಟ್ ಮೂಲಕ ಈ ವಿಷಯ ತಿಳಿಸಿರುವ ಅವರು, ಈ ಸಂಬಂಧ ಪತ್ರಗಳನ್ನಷ್ಟೇ ಬರೆದಿದ್ದೆ. ತಿದ್ದಿಕೊಳ್ಳಲಿಲ್ಲ. ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರಪರ, ಸರ್ಕಾರದ ಪರ ಅಲ್ಲ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.