ಬೆಂಗಳೂರು: ಬಿಜೆಪಿ ಪರವಾದ ಫಲಿತಾಂಶ ಸಮೀಕ್ಷೆ ಅವರೇ ಹೇಳಿ ಮಾಡಿಸಿದ ರೀತಿ ಇದೆ. ಆದರೆ ವಸ್ತು ಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೇಳಿದ್ದಾರೆ.
ಸದಾಶಿವನಗರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 300-400 ಸೀಟು ಬರುತ್ತದೆ ಎಂದು ಮತಗಟ್ಟೆ ಸಮೀಕ್ಷೆ ಮೂಲಕ ಹೇಳಿಸಿಕೊಂಡು ಬಿಜೆಪಿ ಸಮಾಧಾನ ಪಟ್ಟುಕೊಳ್ಳುವ ಕೆಲಸ ಮಾಡುತ್ತಿದೆ.
ವಾಸ್ತವದಲ್ಲಿ ಯುಪಿಎ ಸರಕಾರ ಅಧಿಕಾರಕ್ಕೆ ಬರಲಿದೆ ಎಂಬ ಮಾಹಿತಿ ಸಿಕ್ಕಿದೆ. ನಿನ್ನೆ ದೆಹಲಿಯಲ್ಲಿ ನಾಯಕರನ್ನು ಭೇಟಿ ಮಾಡಿದಾಗಲೂ ಇದೇ ಅಭಿಪ್ರಾಯ ಕೇಳಿ ಬಂದಿದೆ. ಕರ್ನಾಟಕದಲ್ಲಿ 18 ಸೀಟು ಬಿಜೆಪಿಗೆ ಬರಲಿದೆ ಎಂಬ ವರದಿಯನ್ನು ನಂಬಲಾದರೂ ಸಾಧ್ಯವೇ?
ಈ ಬಾರಿ ಸಮೀಕ್ಷಾ ವರದಿ ಸಂಪೂರ್ಣ ತಪ್ಪಿದೆ. ಅದರಲ್ಲೂ ಕರ್ನಾಟಕದ ಸ್ಥಿತಿ ಗೊತ್ತಿದೆ. ಜೆಡಿಎಸ್ ಕಾಂಗ್ರೆಸ್ ಪಕ್ಷವೇ ಹೆಚ್ಚು ಸ್ಥಾನ ಗಳಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ.
ಇವಿಎಂ ಬೇಡ, ಬ್ಯಾಲೆಟ್ ಪೇಪರ್ ತರುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ. ಇವಿಎಂ ಹ್ಯಾಕ್ ಮಾಡುವ ಸಾಧ್ಯತೆಯ ಬಗ್ಗೆ ಉದಾಹರಣೆ ನೋಡಿದ್ದೇವೆ. ಆ ಅನುಮಾನವೂ ಮೂಡಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.