ADVERTISEMENT

ನೌಕರರ ಬೇಡಿಕೆಗಳ ಅಧ್ಯಯನಕ್ಕೆ ತಜ್ಞರ ತಂಡ: ಪ್ರಸ್ತಾವನೆ ಸಲ್ಲಿಕೆಗೆ ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 15:49 IST
Last Updated 14 ಅಕ್ಟೋಬರ್ 2024, 15:49 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ಗ್ರಾಮ ಪಂಚಾಯತ್‌ ಸದಸ್ಯರು, ಅಧಿಕಾರಿಗಳು  ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸುವ ಸಂಬಂಧ ಪ್ರಸ್ತಾವನೆಯೊಂದನ್ನು ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಈ ಕುರಿತು ವಿಧಾನಪರಿಷತ್‌ನ ಕಾಂಗ್ರೆಸ್‌ ಸದಸ್ಯ ದಿನೇಶ್‌ ಗೂಳಿಗೌಡ ಅವರು ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಪತ್ರ ಬರೆದು, ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ತಜ್ಞರ ಸಮಿತಿ ರಚಿಸುವಂತೆ ಒತ್ತಾಯಿಸಿದ್ದರು.

ADVERTISEMENT

ಈ ಸಂಬಂಧ ಪಂಚಾಯಿತಿ ಒಕ್ಕೂಟಗಳ ಪದಾಧಿಕಾರಿಗಳ ಸಭೆ ನಡೆಸಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಸಮಸ್ಯೆಗಳ ಅಧ್ಯಯನ ಹಾಗೂ ಇತ್ಯರ್ಥಕ್ಕೆ ತಜ್ಞರ ತಂಡ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.