ADVERTISEMENT

ಸರ್ಕಾರಿ ನೌಕರರ ವರ್ಗಾವಣೆ ಅವಧಿ 15ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2024, 15:41 IST
Last Updated 10 ಜುಲೈ 2024, 15:41 IST
<div class="paragraphs"><p>ವಿಧಾನಸೌಧ </p></div>

ವಿಧಾನಸೌಧ

   

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ (2024–25) ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ನಿಗದಿಪಡಿಸಿದ್ದ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಎಲ್ಲ ವೃಂದಗಳಿಗೆ (ಗ್ರೂಪ್‌ ಎ, ಬಿ, ಡಿ, ಸಿ) ಅನ್ವಯವಾಗುವಂತೆ, ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ 6ರನ್ನು ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಅಧಿಕಾರವನ್ನು ಆಯಾ ಇಲಾಖೆಗಳ ಸಚಿವರಿಗೆ ನೀಡಲಾಗಿದೆ.

ADVERTISEMENT

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿದಂತೆ ಜೂನ್‌ 15ರಂದು ಆದೇಶ ಹೊರಡಿಸಿದ್ದ ಸರ್ಕಾರ, ಜುಲೈ 9ರವರೆಗೆ ಅವಕಾಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.