ADVERTISEMENT

ಗಣೇಶ ಹಬ್ಬ: 1200 ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2018, 12:40 IST
Last Updated 7 ಸೆಪ್ಟೆಂಬರ್ 2018, 12:40 IST
   

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಇದೇ 11ರಂದು ಹಾಗೂ 12ರಂದು 1200 ಹೆಚ್ಚುವರಿ ಬಸ್‌ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಿದೆ.

ರಾಜ್ಯದ ಮತ್ತು ಬೇರೆ ರಾಜ್ಯಗಳ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಿದೇ 16ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಎಲ್ಲಿಂದ ಎಲ್ಲಿಗೆ ಬಸ್‌:

ADVERTISEMENT

*ಮೆಜೆಸ್ಟಿಕ್‌ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರ್ಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ವಿಶೇಷ ಕಾರ್ಯಾಚರಣೆ.

*ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ.

*ಮಧುರೈ, ಕುಂಭಕೋಣ, ತಿರುಚ್ಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್‌ಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ.

*ಪೀಣ್ಯ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭಿಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರದಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.