ADVERTISEMENT

ನಕಲಿ ಜಾತಿ ಪ್ರಮಾಣ ಪತ್ರ | ಕೊತ್ತೂರು ಮಂಜುನಾಥ್‌ ಅರ್ಜಿ: ಕಾಯ್ದಿರಿಸಿದ ಆದೇಶ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 19:47 IST
Last Updated 19 ಸೆಪ್ಟೆಂಬರ್ 2024, 19:47 IST
ಕೊತ್ತೂರು ಮಂಜುನಾಥ್‌
ಕೊತ್ತೂರು ಮಂಜುನಾಥ್‌   

ಬೆಂಗಳೂರು: ‘ನಕಲಿ ಜಾತಿ ಪ್ರಮಾಣ ಪತ್ರ ಪಡೆದು ವಂಚನೆ ಮಾಡಿದ ಆರೋಪದಡಿ ನನ್ನ ವಿರುದ್ಧ ದಾಖಲಿಸಲಾಗಿರುವ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಕೋಲಾರದ ಹಾಲಿ ಶಾಸಕ ಜಿ.ಮಂಜುನಾಥ ಕೊತ್ತೂರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ.

‘ಕೋಲಾರದ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ–2ರಲ್ಲಿನ ಪ್ರಕರಣವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಜಿ.ಮಂಜುನಾಥ್‌ (39) ಕೊತ್ತೂರು ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ‘ಶಾಸಕರು–ಸಂಸದರ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಆದೇಶ ಕಾಯ್ದಿರಿಸಿರುವುದಾಗಿ ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT