ADVERTISEMENT

ರೈತರಿಗೆ ಶೂನ್ಯ ಬಡ್ಡಿಯಲ್ಲಿ ₹ 3 ಲಕ್ಷದವರೆಗೆ ಸಾಲ, ಷರತ್ತು ಸಡಿಲಿಸಿ ಆದೇಶ

​ಪ್ರಜಾವಾಣಿ ವಾರ್ತೆ
Published 22 ಮೇ 2020, 7:11 IST
Last Updated 22 ಮೇ 2020, 7:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ರೈತರಿಗೆ ಪತ್ತಿನ ಸಹಕಾರ ಸಂಸ್ಥೆಗಳು 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ₹3 ಲಕ್ಷದ ವರೆಗೆ ಅಲ್ಪಾವಧಿ ಕೃಷಿ ಸಾಲ ನೀಡುವ ವಿಷಯದಲ್ಲಿ ತನ್ನ ಹಿಂದಿನ ಕೆಲವು ಷರತ್ತುಗಳನ್ನು ಸಡಿಲಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.

ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಬೇಕೆಂದು ಸರ್ಕಾರ ಮಾರ್ಚ್ 30ರಂದು ಹೊರಡಿಸಿದ ಆದೇಶದಲ್ಲಿನ ಕೆಲವು ಷರತ್ತುಗಳನ್ನು ಈಡೇರಿಸಲು ಸಾಧ್ಯವಿಲ್ಲ. ಸಾಲ ವಿತರಣಾ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಷರತ್ತುಗಳನ್ನು ಪಾಲಿಸಲು ಕಷ್ಟವಾಗಿದೆ ಎಂದು ಡಿಸಿಸಿ ಬ್ಯಾಂಕುಗಳ ಅಧ್ಯಕ್ಷರು ಮತ್ತು ಸಹಕಾರಿಗಳು ಮನವಿ ಮಾಡಿದ್ದರು. ಹೀಗಾಗಿ ಸರ್ಕಾರ ಹೊಸದಾಗಿ ಕೆಲವು ಮಾರ್ಪಾಡು ಮಾಡಿದ ಷರತ್ತುಗಳೊಂದಿಗೆ ಸಾಲ ನೀಡಿಕೆಯ ಆದೇಶ ನೀಡಿದೆ.

ಶೂನ್ಯ ಬಡ್ಡಿ ದರ ₹3 ಲಕ್ಷದವರೆಗಿನ ಸಾಲಕ್ಕೆ ಮಾತ್ರ ಅನ್ವಯ, ₹3 ಲಕ್ಷಕ್ಕಿಂತ ಹೆಚ್ಚಿನ ಸಾಲದ ಸಂಪೂರ್ಣ ಮೊತ್ತಕ್ಕೆ ಸಾಮಾನ್ಯ ಬಡ್ಡಿ ಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.