ADVERTISEMENT

ರೈತರನ್ನು ವಾಪಸ್‌ ಕರೆತರಲು ಕ್ರಮ: ಸರ್ಕಾರದ ಭರವಸೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 16:04 IST
Last Updated 14 ಫೆಬ್ರುವರಿ 2024, 16:04 IST
   

ಬೆಂಗಳೂರು: ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಲೆಂದು ರಾಜ್ಯದಿಂದ ತೆರಳಿದ್ದ 70 ರೈತರನ್ನು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಂಧಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಭರವಸೆ ನೀಡಿದರು.

ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದ ರೈತರನ್ನು ಭೋಪಾಲ್‌ನಲ್ಲಿ ಬಂಧಿಸಿದ ಕ್ರಮ ಸರಿಯಲ್ಲ. ಸಾಂವಿಧಾನಿಕ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ ಎಂದರು.

‘ಬಂಧಿತ 70 ರೈತರಲ್ಲಿ 25 ಮಹಿಳೆಯರೂ ಇದ್ದಾರೆ. ಇವರೆಲ್ಲರನ್ನೂ ಸುರಕ್ಷಿತವಾಗಿ ಕರೆ ತರಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಬೇಕು’ ಎಂದು ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದರು.

ADVERTISEMENT

ಸಭಾಧ್ಯಕ್ಷ ಯು.ಟಿ.ಖಾದರ್‌ ಮಾತನಾಡಿ, ‘ಈ ಘಟನೆ ಮಧ್ಯಪ್ರದೇಶದಲ್ಲಿ ನಡೆದಿರುವುದರಿಂದ ಅಲ್ಲಿನ ಸರ್ಕಾರದ ಜತೆ ಮಾತನಾಡಿ ನಮ್ಮ ರಾಜ್ಯದ ರೈತರನ್ನು ವಾಪಸ್‌ ಕರೆಸಿಕೊಳ್ಳಬೇಕು’ ಎಂದು ಸರ್ಕಾರಕ್ಕೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.