ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳ ಶೈಕ್ಷಣಿಕ ಶುಲ್ಕವನ್ನು ಶೇ 10ರಷ್ಟು ಹೆಚ್ಚಳ ಮಾಡಲಾಗಿದೆ.
ವಿಶ್ವವಿದ್ಯಾಲಯಗಳು ಸಲ್ಲಿಸಿದ್ದ ಪ್ರಸ್ತಾವಕ್ಕೆ ಉನ್ನತ ಶಿಕ್ಷಣ ಇಲಾಖೆ ಸಮ್ಮತಿ ನೀಡಿದೆ. ಕೋವಿಡ್ ಆರಂಭಕ್ಕೂ ಮೊದಲು ಸಲ್ಲಿಸಿದ್ದ ಶುಲ್ಕ ಹೆಚ್ಚಳ ಪ್ರಸ್ತಾವವನ್ನು ಸರ್ಕಾರ ತಡೆ ಹಿಡಿದಿತ್ತು. ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದು, ಶುಲ್ಕ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಎಲ್ಲ ವಿಶ್ವವಿದ್ಯಾಲಯಗಳೂ ಮರುಪ್ರಸ್ತಾವ ಸಲ್ಲಿಸಿದ್ದವು.
ವಿವಿಧ ವಿಷಯಗಳ ಪ್ರವೇಶಕ್ಕೆ ಇದುವರೆಗೂ ಇದ್ದ ಶುಲ್ಕವನ್ನು ಶೇ 10ರಷ್ಟು ಹೆಚ್ಚಳ ಮಾಡಲು ಸಮ್ಮತಿ ದೊರೆತಿರುವುದರಿಂದ ಬಿ.ಎ, ಬಿ.ಕಾಂ, ಬಿ.ಎಸ್‌ಸಿ ಸೇರಿದಂತೆ ಪದವಿ ಪ್ರವೇಶ ದುಬಾರಿಯಾಗಲಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.