ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್’ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಸರ್ಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು, ಪಾಕಿಸ್ತಾನ ಬೆಂಬಲಿತರು, ಟಿಪ್ಪು ಸಿದ್ಧಾಂತವಾದಿಗಳು ಹೆಚ್ಚಿದ್ದಾರೆ. ಭಯೋತ್ಪಾದನೆ ಹಾಗೂ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕಾರಿ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.