ಬೆಂಗಳೂರು: ಮೂರು ಪದವೀಧರ ಕ್ಷೇತ್ರ ಹಾಗೂ ನಾಲ್ಕು ಶಿಕ್ಷಕರ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣೆ ಆಯೋಗ ಶನಿವಾರ ಪ್ರಕಟಿಸಿದೆ.
ಕೇಂದ್ರ ಚುನಾವಣೆ ಆಯೋಗದ ವೇಳಾಪಟ್ಟಿಯಂತೆ ಹೊಸದಾಗಿ ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ.
ಈಶಾನ್ಯ, ನೈರುತ್ಯ, ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಆಗ್ನೇಯ, ನೈರುತ್ಯ ಶಿಕ್ಷಕರ ಕ್ಷೇತ್ರಗಳ ಸದಸ್ಯರ ಅವಧಿ 2024ರ ಜೂನ್ 6ರಂದು ಮುಗಿಯಲಿದೆ. ನೈರುತ್ಯ ಪದವೀಧರರ ಕ್ಷೇತ್ರದ ಸದಸ್ಯ ಆಯನೂರು ಮಂಜುನಾಥ ಅವರು ರಾಜೀನಾಮೆ ನೀಡಿರುವುದರಿಂದ ಸ್ಥಾನ ಏ.19ರಿಂದ ಖಾಲಿ ಉಳಿದಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಸದಸ್ಯ ಪುಟ್ಟಣ್ಣ ಅವರು ರಾಜೀನಾಮೆ ನೀಡಿದ್ದರಿಂದ ಮಾರ್ಚ್ 16ರಿಂದ ಖಾಲಿ ಉಳಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.