ನವದೆಹಲಿ: ಕೇಂದ್ರ ಸರ್ಕಾರವು ಈ ಆರ್ಥಿಕ ವರ್ಷದಲ್ಲಿ ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದಲ್ಲಿ ₹448.29 ಕೋಟಿಗಳ ಮೊದಲ ಕಂತನ್ನು ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರವು ಪಂಚಾಯತ್ ರಾಜ್ ಸಚಿವಾಲಯ ಮತ್ತು ಜಲಶಕ್ತಿ ಸಚಿವಾಲಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಆಯೋಗದ ಅನುದಾನ ಬಿಡುಗಡೆ ಮಾಡಲು ಶಿಫಾರಸು ಮಾಡುತ್ತದೆ. ನಂತರ ಅದನ್ನು ಹಣಕಾಸು ಸಚಿವಾಲಯ ಬಿಡುಗಡೆ ಮಾಡುತ್ತದೆ.
ಮಂಜೂರು ಮಾಡಿದ ಅನುದಾನವನ್ನು ಆರ್ಥಿಕ ವರ್ಷದಲ್ಲಿ 2 ಕಂತುಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಈ ಮೊತ್ತವನ್ನು ರಾಜ್ಯದ 5,949 ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.