ಬಾಗಲಕೋಟೆ: ಮಹಾಲಿಂಗ ಪುರ ಪುರಸಭೆ ಅಧ್ಯಕ್ಷ–ಉಪಾಧ್ಯಕ್ಷರ ಆಯ್ಕೆಯ ವೇಳೆ ನಡೆದ ಸದಸ್ಯೆಯರ ತಳ್ಳಾಟ ಹಾಗೂ ಗದ್ದಲದ ಪ್ರಕರಣಕ್ಕೆ ಸಂಬಂಧಿಸಿದಂತೆ ತೇರದಾಳ ಶಾಸಕ ಸಿದ್ದು ಸವದಿ ಸೇರಿದಂತೆ 31 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕಳೆದ ನವೆಂಬರ್ 9ರಂದು ಈ ಘಟನೆ ನಡೆದಿತ್ತು.
ನಂತರ ಸದಸ್ಯೆ ಚಾಂದಿನಿ ನಾಯಕ ಬಾಗಲಕೋಟೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಡಿ.31ರಂದು ಎಫ್‌ಐಆರ್ ದಾಖಲಾಗಿದೆ.
ಶಾಸಕ ಸಿದ್ದು ಸವದಿ, ಬೆಂಬಲಿಗರಾದ ರವಿ ಜವಳಗಿ, ಪ್ರಹ್ಲಾದ ಸಣ್ಣಕ್ಕಿ, ರಾಜು ಚಮಕೇರ, ಸ್ನೇಹಲ್ ಅಂಗಡಿ ಸೇರಿದಂತೆ 31 ಮಂದಿಯ ವಿರುದ್ಧ ಸದಸ್ಯೆಯ ಗೌರವಕ್ಕೆ ಧಕ್ಕೆ, ಅಪಹರಣ, ಜೀವಬೆದರಿಕೆ, ಜಾತಿ ನಿಂದನೆ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.