ಬೆಂಗಳೂರು: ಬೈಕ್ ಅಪಘಾತದಲ್ಲಿ ಗಾಯಗೊಂಡು ಸಂಚಾರಿ ವಿಜಯ್ (42) ಅವರ ಮಿದುಳು ನಿಷ್ಕ್ರಿಯವಾಗಿರುವ ಪ್ರಕರಣದಲ್ಲಿ, ಸ್ನೇಹಿತ ಪಿ.ಎಸ್. ನವೀನ್ ವಿರುದ್ಧ ಜಯನಗರ ಸಂಚಾರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ವಿಜಯ್ ಅವರ ಸಹೋದರ ಸಿದ್ದೇಶ್‌ಕುಮಾರ್ ದೂರು ನೀಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಜೀವಕ್ಕೆ ಕುತ್ತು ತಂದ ಆರೋಪದಡಿ ನವೀನ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
ಇದನ್ನೂ ಓದಿ:ನಟ ಸಂಚಾರಿ ವಿಜಯ್ ಮೆದುಳು ನಿಷ್ಕ್ರಿಯ: ಎರಡು ಪರೀಕ್ಷೆಗಳಲ್ಲಿ ಸಾಬೀತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.