ADVERTISEMENT

ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪ; ಯತೀಂದ್ರ ವಿರುದ್ಧದ ಎಫ್‌ಐಆರ್ ರದ್ದು

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 15:47 IST
Last Updated 26 ಜುಲೈ 2024, 15:47 IST
<div class="paragraphs"><p>ಯತೀಂದ್ರ&nbsp;ಸಿದ್ದರಾಮಯ್ಯ</p></div>

ಯತೀಂದ್ರ ಸಿದ್ದರಾಮಯ್ಯ

   

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್‌-19ರ ಮಾರ್ಗಸೂಚಿ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಈ ಸಂಬಂಧ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರು ಶುಕ್ರವಾರ ಪುರಸ್ಕರಿಸಿ ಆದೇಶಿಸಿದ್ದಾರೆ.

ADVERTISEMENT

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಮುಖಂಡರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಯನ್ನು ಹೈಕೋರ್ಟ್‌ ಈ ಹಿಂದೆಯೇ ರದ್ದುಪಡಿಸಿತ್ತು. ಇದರನ್ವಯ ಯತೀಂದ್ರ ಅವರ ಅರ್ಜಿಯನ್ನೂ ನ್ಯಾಯಪೀಠ ಪರಿಗಣಿಸಿತು.

ಪ್ರಕರಣವೇನು?: ಮೇಕೆದಾಟು ಅಣೆಕಟ್ಟೆ ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ 2022ರ ಜನವರಿ 9ರಿಂದ 10 ದಿನಗಳ ಕಾಲ ರಾಮನಗರ ಜಿಲ್ಲೆಯ ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ಬಸವನಗುಡಿ ನ್ಯಾಷನಲ್‌ ಕಾಲೇಜುವರೆಗೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯಲ್ಲಿ ಸಾತನೂರು ಪೊಲೀಸ್‌ ಠಾಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ಪಕ್ಷದ 30 ನಾಯಕರ ವಿರುದ್ಧ 2022ರ ಜನವರಿ 9ರಂದು ಎಫ್‌ಐಆರ್‌ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ 20ನೇ ಆರೋಪಿಯಾಗಿದ್ದ ಯತೀಂದ್ರ, ‘ನನ್ನ ವಿರುದ್ಧದ ಎಫ್‌ಐಆರ್‌ ಹಾಗೂ ಕನಕಪುರದ 1ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿನ ವಿಚಾರಣೆ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.