ADVERTISEMENT

ಲೋಕಸಭೆ ಅಧಿವೇಶನ: ಐದು ಮಸೂದೆಗೆ ಕೇಂದ್ರದ ಅನುಮೋದನೆ ಬಾಕಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2023, 15:44 IST
Last Updated 12 ಡಿಸೆಂಬರ್ 2023, 15:44 IST
<div class="paragraphs"><p>ಲೋಕಸಭೆ ಅಧಿವೇಶನ</p></div>

ಲೋಕಸಭೆ ಅಧಿವೇಶನ

   

ನವದೆಹಲಿ: ಕರ್ನಾಟಕ ರಾಜ್ಯದ ಐದು ಮಸೂದೆಗಳಿಗೆ ಕೇಂದ್ರ ಸರ್ಕಾರದ ಅನುಮೋದನೆ ಸಿಕ್ಕಿಲ್ಲ. 

ಈ ಬಗ್ಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಲೋಕಸಭೆಯಲ್ಲಿ ಮಂಗಳವಾರ ಉತ್ತರ ನೀಡಿದ್ದಾರೆ. 

ADVERTISEMENT

‘ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (ಕರ್ನಾಟಕ ತಿದ್ದುಪಡಿ) ಮಸೂದೆ–2015, ಕರ್ನಾಟಕ ಕುಲಾಂತರಿ ಹಾಗೂ ತಳಿ ವಿಜ್ಞಾನದ ಪ್ರಕಾರ ಮಾರ್ಪಾಡಾದ ಹತ್ತಿ ಬೀಜಗಳ (ಮಾರಾಟ ಬೆಲೆ ನಿಗದಿ ಹಾಗೂ ಪರಿಹಾರ ಸಂದಾಯ) ಮಸೂದೆ–2015, ಕ್ರಿಮಿನಲ್ ಕಾನೂನು ತಿದ್ದುಪಡಿ ಸುಗ್ರೀವಾಜ್ಞೆ (ಕರ್ನಾಟಕ ತಿದ್ದುಪಡಿ) ಮಸೂದೆ– 2022, ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ– 2023 ಸೇರಿದಂತೆ ಐದು ಮಸೂದೆಗಳು ಸಚಿವಾಲಯದಲ್ಲಿ ಬಾಕಿ ಉಳಿದಿವೆ’ ಎಂದು ಅವರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.