ADVERTISEMENT

ರಾಜ್ಯ ಪರಿಸರ ಪ್ರಶಸ್ತಿಗೆ ಮೂವರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:43 IST
Last Updated 2 ಜುಲೈ 2024, 16:43 IST

ಬೆಂಗಳೂರು: ಪರಿಸರ ಸಂರಕ್ಷಣೆ ಮತ್ತು ಪರಿಸರ ನಿರ್ವಹಣೆ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಅರಣ್ಯ ಇಲಾಖೆಯಿಂದ ನೀಡಲಾಗುವ 2023-24ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಗೆ ಮೂವರನ್ನು ಆಯ್ಕೆ ಮಾಡಲಾಗಿದೆ.

ಉತ್ತರ ವಲಯದಿಂದ ರಾಯಚೂರಿನ ಈರಣ್ಣ ಕೋಸಗಿ, ಮಲೆನಾಡು ಕರಾವಳಿ ವಲಯದಿಂದ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸುಧೀರ ದೇವಣ್ಣ ನಾಯಕ, ದಕ್ಷಿಣ ವಲಯದಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ರಮೇಶ್‌ ವೈ ಬಿನ್‌ ಯಾಲಕ್ಕಯ್ಯ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಪ್ರಶಸ್ತಿಯು ತಲಾ ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು 36 ಅರ್ಜಿಗಳು ಬಂದಿದ್ದವು. ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಮಿತಿ ಅರ್ಹರನ್ನು ಆಯ್ಕೆ ಮಾಡಿದೆ. ಸಂಸ್ಥೆಗಳ ವಿಭಾಗದಲ್ಲಿ ಬಂದ ಅರ್ಜಿಗಳು ಕಡಿಮೆ ಇದ್ದ ಕಾರಣ, ಮತ್ತೊಮ್ಮೆ ಅರ್ಜಿ ಆಹ್ವಾನಿಸಲಾಗುವುದು. ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ವನ್ಯಜೀವಿ ಸಪ್ತಾಹದ ಅವಧಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.