ADVERTISEMENT

ಅರಣ್ಯವಾಸಿಗಳ ಸಮಸ್ಯೆ: ಸದನದಲ್ಲಿ ಚರ್ಚೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2023, 14:44 IST
Last Updated 10 ನವೆಂಬರ್ 2023, 14:44 IST
<div class="paragraphs"><p>ಅರಣ್ಯ ಪ್ರದೇಶ (ಸಾಂದರ್ಭಿಕ ಚಿತ್ರ)</p></div>

ಅರಣ್ಯ ಪ್ರದೇಶ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ಅರಣ್ಯವಾಸಿಗಳ ಸಮಸ್ಯೆ ಹಾಗೂ ಕಸ್ತೂರಿರಂಗನ್‌ ವರದಿ ಕುರಿತು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದಲ್ಲಿ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ರಾಜ್ಯ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಒತ್ತಾಯಿಸಿದರು.

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ಅರಣ್ಯ ಹಕ್ಕು ಕಾಯ್ದೆಯ ಅನುಷ್ಠಾನದ ವೈಫಲ್ಯದಿಂದ ರಾಜ್ಯದಲ್ಲಿ ಅರಣ್ಯವಾಸಿಗಳಿಗೆ ಭೂಮಿಯ ಹಕ್ಕು ಸಿಗುತ್ತಿಲ್ಲ. ಅರಣ್ಯ ಹಕ್ಕು ಕಾಯಿದೆ ಅಡಿ 2,98,048 ಅರ್ಜಿಗಳು ಸಲ್ಲಿಕೆಯಾಗಿವೆ. ಅವುಗಳಲ್ಲಿ 1,84,358 ಅರ್ಜಿಗಳು ತಾಂತ್ರಿಕ ಕಾರಣಗಳಿಂದ ತಿರಸ್ಕೃತವಾಗಿವೆ. ಇದರಿಂದ ಅರಣ್ಯ ನಂಬಿಕೊಂಡವರ ಬದುಕು ದುಸ್ತರವಾಗಿದೆ ಎಂದರು.

ADVERTISEMENT

ಮತ್ತೊಂದೆಡೆ ಕಸ್ತೂರಿರಂಗನ್‌ ವರದಿಯಿಂದ ಜನರಿಗೆ ಆತಂಕವಾಗಿದೆ. ಅವೈಜ್ಞಾನಿಕ ವರದಿಯಿಂದ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಕಾರವಾರ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಜನರು ನೈಜ ಬದುಕಿನಿಂದ ವಂಚಿತರಾಗುತ್ತಾರೆ. ಈ ಎರಡೂ ವಿಷಯಗಳ ಕುರಿತು ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.