ಬೆಂಗಳೂರು: ವಾಲ್ಮೀಕಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು ಐವರು ಸದಸ್ಯರ ಸಮಿತಿ ರಚನೆಯಾಗಿದ್ದು, ಈ ಬಾರಿ ಐವರು ಸಾಧಕರಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
2024 ನೇ ಸಾಲಿನ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಬಾರಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ವಾಲ್ಮೀಕಿ ಜಯಂತಿಯ ದಿನ ಬಸವನಗುಡಿಯಿಂದ ಜ್ಯೋತಿ ಆಗಮಿಸಲಿದ್ದು, ಎಲ್ಲ ಸಮುದಾಯಗಳ ಮುಖಂಡರು ಭಾಗವಹಿಸುತ್ತಾರೆ ಎಂದು ಹೇಳಿದರು.
ವಾಲ್ಮೀಕಿ ನಿಗಮದ ಹಗರಣದಲ್ಲಿ ಎಷ್ಟು ಹಣ ಹೊರಗಡೆ ಹೋಗಿದೆ. ನ್ಯಾಯಾಲಯ ಎಷ್ಟು ಹಣವನ್ನು ತಡೆ ಹಿಡಿದಿದೆ. ಹಣ ವಾಪಸ್ ಬಂದಿದೆಯೇ ಇಲ್ಲವೇ ಎಂಬ ಬಗ್ಗೆ ಆತಂಕ ಬೇಕಿಲ್ಲ. ಈ ಕಾರ್ಯಕ್ರಮ ನಡೆಸಲು ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು ರಾಜಣ್ಣ ತಿಳಿಸಿದರು.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಲ್ಮೀಕಿ ಸಮುದಾಯದ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.