ADVERTISEMENT

ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 12:55 IST
Last Updated 19 ಅಕ್ಟೋಬರ್ 2024, 12:55 IST
<div class="paragraphs"><p>ಎಸ್‌.ಎಂ. ಕೃಷ್ಣ</p></div>

ಎಸ್‌.ಎಂ. ಕೃಷ್ಣ

   

ಬೆಂಗಳೂರು: ವಯೋಸಹಜ ಅನಾರೋಗ್ಯ ಸಮಸ್ಯೆ ಕಾರಣ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ಶನಿವಾರ ದಾಖಲಾಗಿದ್ದಾರೆ.

ಡಾ.ಸತ್ಯನಾರಾಯಣ ಹಾಗೂ ಡಾ. ಸುನೀಲ್ ಕಾರಂತ ನೇತೃತ್ವದ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ಒದಗಿಸುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ಮನೆಗೆ ಸೋಮವಾರ ತೆರಳಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ADVERTISEMENT

ಕೆಲ ತಿಂಗಳ ಹಿಂದೆ ಶ್ವಾಸಕೋಶದ ಸೋಂಕಿನಿಂದಾಗಿ ಉಸಿರಾಟದ ಸಮಸ್ಯೆ ಎದುರಿಸಿದ್ದ ಅವರು, ನಿರಂತರ ನಾಲ್ಕು ತಿಂಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು, ಆಗಸ್ಟ್‌ 28ರಂದು ಮಣಿಪಾಲ್ ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.