ADVERTISEMENT

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ

​ಪ್ರಜಾವಾಣಿ ವಾರ್ತೆ
Published 22 ಮೇ 2024, 4:45 IST
Last Updated 22 ಮೇ 2024, 4:45 IST
<div class="paragraphs"><p>ಇಕ್ಬಾಲ್ ಅಹಮದ್ ಸರಡಗಿ</p></div>

ಇಕ್ಬಾಲ್ ಅಹಮದ್ ಸರಡಗಿ

   

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇದ್ದಾರೆ. ಕುಟುಂಬದ ಮೂಲಗಳ ಪ್ರಕಾರ, ಬುಧವಾರ ಸಂಜೆ ಹಫ್ತ್ ಗುಂಬಜ್ ಸಮೀಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಎಂದು ತಿಳಿಸಿವೆ.

ADVERTISEMENT

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ‌ ಸೂಚಿಸಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್ ಅಹಮದ್ ಸರಡಗಿ ಅವರು 1999 ಮತ್ತು 2004ರಲ್ಲಿ ಸಂಸದರಾದರು. 2008ರಲ್ಲಿ ಕ್ಷೇತ್ರಗಳ ವಿಂಗಡಣೆಯ ನಂತರ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದರಿಂದ ಕ್ಷೇತ್ರದಲ್ಲಿ ಖರ್ಗೆ ಅವರು ಸ್ಪರ್ಧಿಸಿದರು. ಇಕ್ಬಾಲ್ ಅವರು ಒಂದು ಬಾರಿ ವಿಧಾನ ಪರಿಷತ್ತಿನ ಸದಸ್ಯರೂ ಆಗಿದ್ದರು.

1944ರ ಜೂನ್ 5ರಂದು ಮೊಹಮದ್ ಅಹಮದ್ ಸರಡಗಿ ಮತ್ತು ಗೌಹರ್ ಬೇಗಂ ದಂಪತಿಗೆ ಜನಿಸಿದ್ದ ಇಕ್ಬಾಲ್, ಕಲಬುರಗಿಯ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಪದವಿ ಹಾಗೂ ಹೈದರಾಬಾದ್‌ನ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.