ADVERTISEMENT

ಮಾಜಿ ಪ್ರಧಾನಿ ದೇವೇಗೌಡರಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಫೆಬ್ರುವರಿ 2024, 14:50 IST
Last Updated 15 ಫೆಬ್ರುವರಿ 2024, 14:50 IST

ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದು, ಉಸಿರಾಟದ ತೊಂದರೆ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ. ‘ಮೂರು ದಿನಗಳಿಂದ ಜ್ವರ ಮತ್ತು ಕೆಮ್ಮು ಸಮಸ್ಯೆಯಿಂದ ಬಳಲುತ್ತಿರುವ ದೇವೇಗೌಡರಿಗೆ ಮನೆಯಲ್ಲಿಯೇ ಚಿಕಿತ್ಸೆ ಕೊಡುತ್ತಿದ್ದೇವು. ಈಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಆತಂಕಪಡುವ ಅಗತ್ಯವಿಲ್ಲ’ ಎಂದು ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.