ಬೆಂಗಳೂರು: ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ‘ಗೃಹ ಜ್ಯೋತಿ’ ಮಾದರಿಯಲ್ಲಿ ಉಚಿತವಾಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.
ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024–25ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಬಜೆಟ್ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ. ಎಲ್ಲ ಶಾಲೆಗಳು ಆಯಾ ವ್ಯಾಪ್ತಿಯ ವಿದ್ಯುತ್ ಸರಬರಾಜು ಕಂಪನಿಯ ಕಚೇರಿಗಳಿಗೆ ಆರ್‌ಆರ್ ಸಂಖ್ಯೆ ಹಾಗೂ ಬಳಕೆದಾರರ ಐಡಿಗಳನ್ನು ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.