ಬೆಂಗಳೂರು: ವಿಶ್ವ ರೇಬಿಸ್ ದಿನವಾದ ಅಂಗವಾಗಿ ಪಶು ಸಂಗೋಪನಾ ಇಲಾಖೆಯು ನಾಯಿಗಳಿಗೆ ಉಚಿತವಾಗಿ ರೇಬೀಸ್ ಲಸಿಕೆ ನೀಡುವ ಮೂರು ದಿನಗಳ ಅಭಿಯಾನ ಹಮ್ಮಿಕೊಂಡಿದೆ.
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಬೀದರ್ನಲ್ಲಿ ಮಂಗಳವಾರ ಈ ಅಭಿಯಾನಕ್ಕೆ ಚಾಲನೆ ನೀಡುವರು.
‘ಮಂಗಳವಾರ ವಿಶ್ವ ರೇಬಿಸ್ ದಿನ. ಈ ಪ್ರಯುಕ್ತ ರೇಬಿಸ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಗುರುವಾರದವರೆಗೂ ರಾಜ್ಯದ ಎಲ್ಲ ಸರ್ಕಾರಿ ಪಶು ಆಸ್ಪತ್ರೆಗಳಲ್ಲಿ ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಗುವುದು’ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.