ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರಿಗೆ ಮುಂದಿನ ತಿಂಗಳಿನಲ್ಲಿ (ಸೆಪ್ಟೆಂಬರ್) ‘ಶುಚಿ ಯೋಜನೆ’ಯಡಿ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ವಿತರಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.
ಶುಚಿ ಯೋಜನೆ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಹೆಣ್ಣು ಮಕ್ಕಳಿಗೆ ಅನುಕೂಲಕರವಾಗಿದ್ದ ಉಚಿತ ಸ್ಯಾನಿಟರಿ ನ್ಯಾಪ್‌ಕಿನ್ ನೀಡುವ ಯೋಜನೆಗೆ ಬಿಜೆಪಿ ಆಡಳಿತದಲ್ಲಿ ಗ್ರಹಣ ಹಿಡಿದಿತ್ತು ಎಂದು ಕುಟುಕಿದೆ.
ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಗೌರವ, ಕಾಳಜಿ ಇಲ್ಲ. ಈ ಕಾರಣದಿಂದಾಗಿ ಶುಚಿ ಯೋಜನೆಯನ್ನು ನಿರ್ಲಕ್ಷಿಸಿತ್ತು. ನಮ್ಮ ಸರ್ಕಾರ ಶುಚಿ ಯೋಜನೆಗಿದ್ದ ಅಡೆತಡೆಗಳನ್ನು ನಿವಾರಿಸಿ ಶಾಲಾ ಕಾಲೇಜಿನ ಹೆಣ್ಣು ಮಕ್ಕಳಿಗೆ ನ್ಯಾಪ್‌ಕಿನ್ ವಿತರಿಸಲು ಕ್ರಮ ಕೈಗೊಂಡಿದೆ. ಮಹಿಳಾ ಸಬಲೀಕರಣ ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ಹೇಳಿದೆ.
ಮತ್ತೊಂದು ಟ್ವೀಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಬೆಲೆ ಏರಿಕೆಯ ಪರಿಣಾಮ ಕುಟುಂಬ ನಿರ್ವಹಣೆ ಭಾರವಾಗಿರುವ ಹೊತ್ತಿನಲ್ಲಿ ಗೃಹಲಕ್ಷ್ಮಿ ಯೋಜನೆ ಜನತೆಗೆ ವರವಾಗಿ ಬರಲಿದೆ.1.28 ಕೋಟಿ ಫಲಾನುಭವಿಗಳಲ್ಲಿ ಇದುವರಿಗೂ 1.9 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದಾರೆ. ಜನತೆಗೆ ಸುಸ್ಥಿರ ಬದುಕನ್ನು ಕಟ್ಟಿಕೊಡುವುದೇ ಅಭಿವೃದ್ಧಿಯ ನೈಜ ಅರ್ಥ ಎಂದು ಕಾಂಗ್ರೆಸ್ ನಂಬಿದೆ ಎಂದು ತಿಳಿಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.