ಬಾಗಲಕೋಟೆ: ಬ್ಲ್ಯಾಕ್ ಫಂಗಸ್‌ಗೆ ತುತ್ತಾದವರು ಗುಣಮುಖರಾಗುವವರೆಗೂ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸೋಂಕಿತರು ಆಸ್ಪತ್ರೆಯಿಂದ ಮನೆಗೆ ಹೋದ ನಂತರವೂ ಮೂರರಿಂದ ನಾಲ್ಕು ವಾರ ಇಂಜೆಕ್ಷನ್ ತೆಗೆದುಕೊಳ್ಳಬೇಕಿದೆ. ಅದಕ್ಕೆ ದುಬಾರಿ ದರ ಇರುವುದರಿಂದ ಸರ್ಕಾರದಿಂದಲೇ ಉಚಿತವಾಗಿ ಇಂಜೆಕ್ಷನ್ ಪೂರೈಸಲಾಗುವುದು ಎಂದರು.
ಮಕ್ಕಳಿಗೆ ಪೌಷ್ಠಿಕ ಆಹಾರದ ಕಿಟ್:
ಕೋವಿಡ್ ಮೂರನೇ ಅಲೆ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯದಂತೆ ರಾಜ್ಯದಲ್ಲಿ ಮಕ್ಕಳ ಆರೋಗ್ಯ ಶಿಬಿರ ನಡೆಸಿ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಠಿಕ ಆಹಾರದ ಕಿಟ್ ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.