ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ (104) ಹೃದಯಾಘಾತದಿಂದ ಬೆಂಗಳೂರಿನಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ ನಿಧನರಾದರು.
ಹೃದಯ ಸಮಸ್ಯೆ ಎದುರಿಸುತ್ತಿದ್ದ ಅವರು, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಅವರಿಗೆ ಹೃದಯ ಕಾಯಿಲೆ, ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ (ಶ್ವಾಸನಾಳಗಳ ಒಳಪೊರೆಯ ಉರಿಯೂತ) ಸೇರಿದಂತೆ ವಿವಿಧ ವಯೋಸಹಜ ಸಮಸ್ಯೆಗಳು ಇದ್ದವು. ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ನಿಧನರಾಗಿದ್ದಾರೆ.
ಕೆಲದಿನಗಳ ಹಿಂದೆ ಹೃದಯ ಸಮಸ್ಯೆ ಸಂಬಂಧಜಯದೇವ ಆಸ್ಪತ್ರೆಗೆ ದಾಖಲಾದ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಅವರಿಗೆ ಜ್ವರ, ನೆಗಡಿ ಹಾಗೂ ಕೆಮ್ಮಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.
ಆಗ ಕೊರೋನಾ ಸೋಂಕಿತರಾಗಿರುವುದು ಖಚಿತಪಟ್ಟಿತ್ತು. ದೊರೆಸ್ವಾಮಿ ಅವರು ಮೇ 6–12ರವರೆಗೆ ಜಯದೇವ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.7 ದಿನಗಳಲ್ಲಿ ಅವರು ಚೇತರಿಸಿಕೊಂಡು ಜಯನಗರದಲ್ಲಿರುವ ನಿವಾಸಕ್ಕೆ ತೆರಳಿದ್ದರು.
ಗುಣಮುಖರಾದ ಒಂದು ದಿನದಲ್ಲಿ, ಅಂದರೆ ಮೇ 14ಕ್ಕೆ ಮತ್ತೆಆಸ್ಪತ್ರೆಗೆ ದಾಖಲಾಗಿದ್ದರು.ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.