ADVERTISEMENT

ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್: ಮರುಳಾರಾಧ್ಯ ಶ್ರೀಗಳ ವಿರುದ್ಧ ಕ್ರಮ– ಪರಮೇಶ್ವರ

ಅಫಜಲಪುರದಲ್ಲಿ ನಡೆದ ವಕ್ಫ್‌ ಹಠಾವೊ, ದೇಶ ಬಚಾವೊ ಪ್ರತಿಭಟನೆಯಲ್ಲಿ ಮಾತನಾಡಿದ್ದ ಮರುಳಾರಾಧ್ಯ ಶ್ರೀಗಳು, ‘ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಬೇಕಾಗುತ್ತದೆ’ ಎಂದು ಹೇಳಿದ್ದರು.

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2024, 15:39 IST
Last Updated 11 ನವೆಂಬರ್ 2024, 15:39 IST
ಜಿ. ಪರಮೇಶ್ವರ
ಜಿ. ಪರಮೇಶ್ವರ   

ಬೆಂಗಳೂರು: ‘ಪ್ರಚೋದನಕಾರಿ ಹೇಳಿಕೆ ನೀಡಿರುವ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಅಫಜಲಪುರ ಪಟ್ಟಣದಲ್ಲಿ ಭಾನುವಾರ ನಡೆದ ‘ವಕ್ಫ್‌ ಹಠಾವೊ, ದೇಶ ಬಚಾವೊ’ ಪ್ರತಿಭಟನೆಯಲ್ಲಿ ಮಾತನಾಡಿದ್ದ ಮರುಳಾರಾಧ್ಯ ಶ್ರೀಗಳು, ‘ಮಕ್ಕಳ ಕೈಗೆ ಪೆನ್ ಬದಲು ತಲ್ವಾರ್ ಕೊಡಬೇಕಾಗುತ್ತದೆ’ ಎಂದು ಹೇಳಿದ್ದರು.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ‘ಈ ರೀತಿ ಹೇಳಿಕೆ ನೀಡಿರುವ ಶ್ರೀಗಳ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ’ ಎಂದರು.

ADVERTISEMENT

‘ಧರ್ಮಗುರುಗಳು ಧರ್ಮದಿಂದ ನಡೆದುಕೊಳ್ಳಬೇಕು. ಧರ್ಮ ಪ್ರಚಾರಕರು ಪ್ರಚೋದನೆ ನೀಡಬಾರದು. ಮಕ್ಕಳ ಕೈಯಲ್ಲಿ ತಲ್ವಾರ್ ಕೊಡಿ ಎನ್ನುವುದು ಸರಿಯಲ್ಲ. ಸ್ವಾಮೀಜಿಗಳು ಯಾರೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.