ಬೆಂಗಳೂರು: ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಈ ಹಿಂದೆ ‘ಎಚ್.ಡಿ.ದೇವೇಗೌಡರು ವಿಷ ಸೇವಿಸುವುದನ್ನು ಕಾಯುತ್ತಿರುವೆ’ ಎಂದು ಹೇಳಿದ್ದ ವಿಡಿಯೊವನ್ನು ಮುಂಡಿಟ್ಟುಕೊಂಡು ಜಿಡಿಎಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
2014ರಲ್ಲಿ ಪರಮೇಶ್ವರ ಅವರು, ದೇವೇಗೌಡರ ವಿರುದ್ಧ ಮಾತನಾಡಿದ್ದಾರೆ. ಹಾಗಾದರೆ ಜೆಡಿಎಸ್ ಕಾರ್ಯಕರ್ತರು ಇದೀಗ ಪರಮೇಶ್ವರ ಅವರ ಮನೆ ಮೇಲೂ ಕಲ್ಲು ತೂರಾಟ ನಡೆಸುತ್ತಾರಾ? ಎಂದು ಪ್ರಶ್ನಿಸಿದೆ. ಅದಲ್ಲದೆ ಪರಮೇಶ್ವರ ಅವರು ಮಾತನಾಡಿರುವವಿಡಿಯೊವನ್ನೂ ಟ್ವಿಟರ್‌ನಲ್ಲಿಪ್ರಕಟಿಸಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ‘ಆಪರೇಷನ್ ಕಮಲಆಡಿಯೊ’ಗೆ ಸಂಬಂಧಿಸಿದಂತೆಹಾಸನ ಶಾಸಕ ಪ್ರೀತಂಗೌಡ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಸಿಎಂಬಗ್ಗೆ ಮಾತನಾಡಿದ್ದರು. ಇದನ್ನು ಖಂಡಿಸಿದ್ದ ಜೆಡಿಎಸ್ ಕಾರ್ಯಕರ್ತರು ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಪ್ರಕರಣದಲ್ಲಿ ಕುಮಾರಸ್ವಾಮಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಸೂಕ್ತ ತನಿಖೆಗೆ ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಕರಣ ಕುರಿತಂತೆ ಸರ್ಕಾರದ ವಿರುದ್ಧ ಬಿಜೆಪಿ ಉಭಯ ಸದನಗಳಲ್ಲೂ ಪ್ರತಿಭಟನೆ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.