ADVERTISEMENT

ಗದಗದಲ್ಲಿ ಶೇ 6.7ರಷ್ಟು ಮತದಾನ 

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 5:08 IST
Last Updated 23 ಏಪ್ರಿಲ್ 2019, 5:08 IST
   

ಗದಗ: ಹಾವೇರಿ ಲೋಕಸಭಾ ಕ್ಷೇತ್ರವ್ಯಾಪ್ತಿಗೆ ಬರುವಗದಗ ಜಿಲ್ಲೆಯ ಗದಗ, ರೋಣ, ಶಿರಹಟ್ಟಿ ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 10 ಗಂಟೆಯವರೆಗೆ ಶೇ 6.7ರಷ್ಟು ಮತದಾನವಾಗಿದೆ.

ರೋಣ ಮತಕ್ಷೇತ್ರದ ಡಂಬಳ ಮತ್ತು ನರೇಗಲ್‌ನಲ್ಲಿ ಎರಡು ಮತಗಟ್ಟೆಗಳಲ್ಲಿ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಮತದಾನ ತಡವಾಗಿ ಪ್ರಾರಂಭವಾಯಿತು. ಉಳಿದ ಕಡೆ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.

ಗದುಗಿನ ಜೆ.ಟಿ ಕಾಲೇಜು ಮತ್ತು ರಾಜೀವಗಾಂಧಿ ನಗರದ ಮತಗಟ್ಟೆಯಲ್ಲಿ ಶತಾಯುಷಿ ಮತದಾರರಿಬ್ಬರು ಮತ ಚಲಾಯಿಸಿದರು. ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಗದಗ ತಾಲ್ಲೂಕಿನ ಹರ್ತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆಗೆ ತೆರಳಿ ಪರಿಶೀಲನೆ ನಡೆಸಿದರು.

ADVERTISEMENT

ಜಿಲ್ಲೆಯಲ್ಲಿ ಒಟ್ಟು 959 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 740 ಮತಗಟ್ಟೆಗಳು ಮತ್ತು ಬಾಗಲಕೋಟೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ 219 ಮತಗಟ್ಟೆಗಳು ಬರುತ್ತವೆ. ಚುನಾವಣಾ ಕಾರ್ಯಕ್ಕಾಗಿ ಒಟ್ಟು 4236 ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 4.30 ಲಕ್ಷ ಪುರುಷ, 4.23 ಲಕ್ಷ ಮಹಿಳೆ ಮತ್ತು 53 ಇತರೆ ಮತದಾರರು ಸೇರಿ ಒಟ್ಟು 8.54 ಲಕ್ಷ ಮತದಾರರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.