ನವದೆಹಲಿ: ಮಂಗಳೂರು–ಮೂಡಿಗೆರೆ–ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ ವಿಸ್ತರಣೆಗೆ ₹343.73 ಕೋಟಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,‘ಇಪಿಸಿ ಮಾದರಿಯಲ್ಲಿ 10.8 ಕಿ.ಮೀ ರಸ್ತೆಯ ವಿಸ್ತರಣೆ ಮಾಡಲಾಗುತ್ತದೆ. ಈ ರಸ್ತೆಯು ದ್ವಿಪಥದ ರಸ್ತೆಯಾಗಿ ಪರಿವರ್ತನೆ ಹೊಂದಲಿದೆ. ಚಾರ್ಮಾಡಿ ಘಾಟ್‌ನ ಗುಡ್ಡಗಾಡು ಪ್ರದೇಶದಲ್ಲಿ ಕೈಗೆತ್ತಿಕೊಳ್ಳುವ ಉಪಕ್ರಮ ಸವಾಲಿನದ್ದು. ಜತೆಗೆ ಸಂಚಾರ ವ್ಯವಸ್ಥೆ ಗಣನೀಯವಾಗಿ ಸುಧಾರಣೆ ಆಗಲಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.