ADVERTISEMENT

ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣ: ಆರೋಪಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2024, 15:29 IST
Last Updated 1 ಮಾರ್ಚ್ 2024, 15:29 IST
<div class="paragraphs"><p>ಗೌರಿ ಲಂಕೇಶ್‌&nbsp;&nbsp;</p></div>

ಗೌರಿ ಲಂಕೇಶ್‌  

   

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಪ್ರಕರಣದ ಆರೋಪಿ ಎನ್‌. ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಆರೋಪಿಗೆ ನೋಟಿಸ್‌ ಜಾರಿ ಮಾಡಿದೆ. 

ಈ ಸಂಬಂಧ ಕರ್ನಾಟಕ ಸರ್ಕಾರದ ಪರ ವಕೀಲ ವಿ.ಎನ್‌.ರಘುಪತಿ ಅವರು ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ವಿಕ್ರಮನಾಥ್‌ ಹಾಗೂ ಸತೀಶ್ಚಂದ್ರ ಶರ್ಮಾ ಅವರಿದ್ದ ಪೀಠವು ಆರೋಪಿಯಿಂದ ಪ್ರತಿಕ್ರಿಯೆ ಕೇಳಿತು. 

ADVERTISEMENT

ಮೃತರ ಸಹೋದರಿ ಕವಿತಾ ಲಂಕೇಶ್‌ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಪೀಠವು ಜನವರಿಯಲ್ಲಿ ಆರೋಪಿಗೆ ನೋಟಿಸ್‌ ನೀಡಿತ್ತು. ಕವಿತಾ ಪರ ವಕೀಲೆ ಅಪರ್ಣಾ ಭಟ್‌ ವಾದ ಮಂಡಿಸಿದ್ದರು. ನ್ಯಾಯಾಲಯವು ಎರಡೂ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ಮಾಡಲು ನಿರ್ಧರಿಸಿದೆ. ಏಪ್ರಿಲ್‌ 9ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ. 

ಆರೋಪಿಗೆ ಹೈಕೋರ್ಟ್‌ 2023ರ ಡಿಸೆಂಬರ್‌ 7ರಂದು ಜಾಮೀನು ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.