ADVERTISEMENT

ಜಿಎಸ್‌ಟಿ ಪರಿಹಾರದಲ್ಲಿ ನ್ಯಾಯಯುತ ಪಾಲು: ರಾಜ್ಯ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2024, 20:46 IST
Last Updated 9 ಸೆಪ್ಟೆಂಬರ್ 2024, 20:46 IST
ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ   

ನವದೆಹಲಿ: ಜಿಎಸ್‌ಟಿ ಪರಿಹಾರದಲ್ಲಿ ನ್ಯಾಯಯುತ ಪಾಲನ್ನು ನೀಡಬೇಕು ಎಂದು ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರದ ಮುಂದೆ ಮತ್ತೊಮ್ಮೆ ಬೇಡಿಕೆ ಮುಂದಿರಿಸಿದೆ. 

ನವದೆಹಲಿಯಲ್ಲಿ ಸೋಮವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೂ, ಜಿಎಸ್‌ಟಿ ಪರಿಹಾರದಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯವಾಗುತ್ತಿದೆ’ ಎಂದು ಅಂಕಿ ಅಂಶಗಳ ಸಹಿತ ವಿವರಿಸಿದರು. ಈ ವಿಷಯದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಶಿಫಾರಸು ಮಾಡಲು ಮಂತ್ರಿಗಳ ತಂಡವನ್ನು ರಚಿಸಲು ಕೌನ್ಸಿಲ್‌ ನಿರ್ಧರಿಸಿತು. 

ಸಭೆಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ‘ಸಚಿವರ ತಂಡವು ಎಲ್ಲ ರಾಜ್ಯಗಳ ಬೇಡಿಕೆ ಕುರಿತು ಅಧ್ಯಯನ ನಡೆಸಲಿದೆ ಹಾಗೂ ರಾಜ್ಯಗಳ ಜತೆಗೆ ಚರ್ಚೆ ನಡೆಸಲಿದೆ. ಕೌನ್ಸಿಲ್ ಸಭೆಯಲ್ಲಿ ಕರ್ನಾಟಕದ ಸಚಿವರು ರಾಜ್ಯದ ಅಂಕಿ ಅಂಶಗಳನ್ನು ಪ್ರಸ್ತುತಪಡಿಸಿದರು’ ಎಂದರು. 

ADVERTISEMENT

ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದ ಕರ್ನಾಟಕಕ್ಕೆ ₹59,274 ಕೋಟಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಆರೋಪಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.