ADVERTISEMENT

ನ.2ರಿಂದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ: ನಿರಾಣಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2022, 12:37 IST
Last Updated 4 ಏಪ್ರಿಲ್ 2022, 12:37 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಉಡುಪಿ: ಬೆಂಗಳೂರಿನಲ್ಲಿ ನ.2 ರಿಂದ 4ರವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ಸೋಮವಾರ ಇಂದ್ರಾಳಿಯಲ್ಲಿ ಕೈಗಾರಿಕೋದ್ಯಮಿಗಳ ಜತೆ ಸಂವಾದ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವರು, ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೂ ಮುನ್ನ ಪ್ರತಿ ಜಿಲ್ಲೆಯಿಂದ ಕನಿಷ್ಠ 1 ಸಾವಿರ ಎಕರೆ ಹಾಗೂ ಬೆಂಗಳೂರು ಸುತ್ತಮುತ್ತ 20,000 ಎಕರೆ ಸೇರಿದಂತೆ 50,000 ಎಕರೆ ಭೂಮಿಯನ್ನು ರೈತರಿಂದ ಖರೀದಿಸಲಾಗುವುದು ಎಂದರು.

ಈ ಬಾರಿಯ ಜಿಮ್‌ ಸಮಾವೇಶದಲ್ಲಿ ಬಯೋ‌ ಟೆಕ್ನಾಲಜಿ, ಸೆಮಿ ಕಂಡಕ್ಟರ್‌, ವಿಮಾನಯಾನ ಹಾಗೂ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಕಂಪನಿಗಳು ಹೆಚ್ಚು ಭಾಗವಹಿಸುವ ನಿರೀಕ್ಷೆ ಇದೆ. ಕೋವಿಡ್‌ ಪೂರ್ವ ಸ್ಥಿತಿಗೆ ರಾಜ್ಯದ ಕೈಗಾರಿಕಾ ಉದ್ಯಮ ತಲುಪಿದೆ. ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ADVERTISEMENT

ವಿದ್ಯುತ್ ದರ ಹೆಚ್ಚಳ ತಾತ್ಕಾಲಿಕ:

ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಳಸುವ ಕಲ್ಲಿದ್ದಲು ದರ ಟನ್‌ಗೆ ₹ 5 ಸಾವಿರದಿಂದ ₹ 12 ಸಾವಿರಕ್ಕೆ ಹೆಚ್ಚಾಗಿರುವ ಪರಿಣಾಮ ವಿದ್ಯುತ್ ದರ ಹೆಚ್ಚಾಗಿದೆ. ದರ ಏರಿಕೆ ತಾತ್ಕಾಲಿಕವಾಗಿದ್ದು, ಕಲ್ಲಿದ್ದಲು ದರ ಇಳಿದರೆ, ವಿದ್ಯುತ್ ದರವೂ ಇಳಿಕೆಯಾಗಲಿದೆ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.