ADVERTISEMENT

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ | 5 ಸಾವಿರ ಉದ್ಯಮಿಗಳ ನಿರೀಕ್ಷೆ: MB ಪಾಟೀಲ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 15:18 IST
Last Updated 11 ಸೆಪ್ಟೆಂಬರ್ 2024, 15:18 IST
<div class="paragraphs"><p> ಎಂ.ಬಿ. ಪಾಟೀಲ </p></div>

ಎಂ.ಬಿ. ಪಾಟೀಲ

   

ನವದೆಹಲಿ: ಬೆಂಗಳೂರಿನಲ್ಲಿ ಮುಂದಿನ ವರ್ಷ ಫೆಬ್ರುವರಿ 12ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (ಜಿಮ್‌) ಐದು ಸಾವಿರ ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು. 

ಜಿಮ್‌ ಸಂಬಂಧ ಕೇಂದ್ರ ಸಚಿವರು, ವಿವಿಧ ದೇಶಗಳ ರಾಯಭಾರಿಗಳು ಹಾಗೂ ಉದ್ಯಮಿಗಳನ್ನು ಭೇಟಿಯಾದ ಬಳಿಕ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಹೂಡಿಕೆ ಮಾಡಲು ಉದ್ಯಮಿಗಳ ಜತೆಗೆ ₹1.35 ಲಕ್ಷ ಕೋಟಿಯ ಒಪ್ಪಂದ ಮಾಡಿಕೊಳ್ಳಲಾಗಿದೆ’ ಎಂದರು. 

ADVERTISEMENT

‘ಕಳೆದ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡ ಬಹುತೇಕ ಒಪ್ಪಂದಗಳು ಕಾರ್ಯಗತಗೊಂಡಿವೆ. ಹಸಿರು ಹೈಡ್ರೊಜನ್‌ ಕ್ಷೇತ್ರದಲ್ಲಿ ಹೂಡಿಕೆ ಸಂಬಂಧ ₹1.5 ಲಕ್ಷ ಕೋಟಿ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮೂಲಸೌಕರ್ಯ ಕೊರತೆ ಕಾರಣದಿಂದ ಈ ಕ್ಷೇತ್ರದಲ್ಲಿ ಉದ್ಯಮಿಗಳು ಹೂಡಿಕೆ ಮಾಡಿಲ್ಲ’ ಎಂದರು. 

ಆಸ್ಟ್ರೇಲಿಯಾ, ಜರ್ಮನಿ ಮತ್ತು ದಕ್ಷಿಣ ಕೊರಿಯಾ ದೇಶಗಳ ಹೈಕಮಿಷನರುಗಳನ್ನು ಭೇಟಿ ಮಾಡಿ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಟಾಯ್ ಝೋನ್, ಎಎಂಡಿ, ವಾಟ್ಲೋ, ಭಾರತ್ ಸೆಮಿ ಸಿಸ್ಟಮ್ಸ್, ಥರ್ಡ್-ಐಟೆಕ್, ಎಚ್ಎಂಇಎಲ್ ಸೇರಿದಂತೆ ಹಲವು ಉದ್ಯಮ ಕಂಪನಿಗಳ ಪ್ರಮುಖರನ್ನು ಕಂಡು, ಸಮಾವೇಶಕ್ಕೆ ಆಮಂತ್ರಿಸಲಾಗಿದೆ ಎಂದರು. 

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌. ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.