ADVERTISEMENT

ಮುಜರಾಯಿ ವಶದಲ್ಲೇ ಗೋಕರ್ಣ ದೇವಸ್ಥಾನ: ಸರ್ಕಾರದ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2018, 20:00 IST
Last Updated 10 ಅಕ್ಟೋಬರ್ 2018, 20:00 IST

ಬೆಂಗಳೂರು: ‘ಗೋಕರ್ಣ ಮಹಾಬಲೇಶ್ವರ ದೇವಾಲಯ ಮುಜರಾಯಿ ಇಲಾಖೆಯ ವಶದಲ್ಲೇ ಮುಂದುವರಿಯಲಿದೆ’ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಮುಜರಾಯಿ ಇಲಾಖೆಯ ಆಯುಕ್ತರಿಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬುಧವಾರ (ಅ.10) ಪತ್ರ ಬರೆದಿದ್ದಾರೆ.

‘ಕೊಲ್ಲೂರು ಮೂಕಾಂಬಿಕಾ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಎಚ್‌. ಹಾಲಪ್ಪ ಅವರಿಗೆ ಗೋಕರ್ಣ ಮಹಾಬಲೇಶ್ವರ ದೇವಾಲಯದ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಈ ಹೊಣೆಯನ್ನು ಸುಪ್ರೀಂ ಕೋರ್ಟ್ ಆದೇಶಕ್ಕೂ ಮೊದಲೇ ನೀಡಲಾಗಿದೆ. ಹೀಗಾಗಿ, ಹಾಲಪ್ಪ ಅವರೇ ಗೋಕರ್ಣ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಮುಂದುವರಿಯಬೇಕಾಗುತ್ತದೆ’ ಎಂಬ ಅಡ್ವೊಕೇಟ್‌ ಜನರಲ್‌ ಅಭಿಪ್ರಾಯವನ್ನು ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.