ADVERTISEMENT

ವರ್ಷಾಂತ್ಯಕ್ಕೆ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ: ಹೈಕೋರ್ಟ್‌ಗೆ ಸರ್ಕಾರ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 20:00 IST
Last Updated 17 ಜೂನ್ 2022, 20:00 IST
   

ಬೆಂಗಳೂರು: ಈ ವರ್ಷದ ಡಿಸೆಂಬರ್ ವೇಳೆಗೆರಾಜ್ಯದ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಪ್ರಾರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಈ ಸಂಬಂಧ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿ, ‘ಹೆಚ್ಚುವರಿಯಾಗಿ 70 ಗೋಶಾಲೆಗಳನ್ನು ತೆರೆಯಲು ಸರ್ಕಾರ ತೀರ್ಮಾನಿಸಿದೆ’ ಎಂದು ವಿವರಿಸಿ,ಯಾವ ತಿಂಗಳಲ್ಲಿ, ಯಾವ ಜಿಲ್ಲೆಯಲ್ಲಿ ಗೋಶಾಲೆ ಕಾರ್ಯಾರಂಭ ಮಾಡಲಿವೆ ಎಂಬ ವೇಳಾಪಟ್ಟಿಯನ್ನು ಸಲ್ಲಿಸಿದರು.

ADVERTISEMENT

‘ಹೊಸ 70 ಗೋಶಾಲೆಗಳ ನಿರ್ಮಾಣಕ್ಕೆ ₹ 20 ಕೋಟಿ, ಕಾಮಗಾರಿ ಚಾಲ್ತಿಯಲ್ಲಿರುವ ಗೋಶಾಲೆಗಳಿಗೆ ₹ 15 ಕೋಟಿ ಸೇರಿದಂತೆ ಗೋಶಾಲೆಗಳ ಸ್ಥಾಪನೆಗೆ ಒಟ್ಟು ₹ 50 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.